ದೆಹಲಿ :
ಜಮ್ಮು ಕಾಶ್ಮೀರದ ಕುಪ್ವಾರ ಮತ್ತು ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳು ನಡೆಸಿರುವ ಎನ್‌ಕೌಂಟರ್‌ನಲ್ಲಿ ಐವರು ಉಗ್ರರ ಹತರಾಗಿದ್ದಾರೆ.
ಉಗ್ರರು ಅವಿತಿಟ್ಟುಕೊಂಡಿರುವ ನಿಖರ ಮಾಹಿತಿಯ ಆಧಾರದ ಮೇಲೆ ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಪೊಲೀಸ್ ದಳ ಜಂಟಿಯಾಗಿ ಎನ್‌ಕೌಂಟರ್ ನಡೆಸಿ, ಮೂವರು ಉಗ್ರರನ್ನು ಹೊಡೆದುರುಳಿಸಿ, ಹತರಾದ ಉಗ್ರರಿಂದ ಎಕೆ-47 ರೈಫಲ್ ಗಳು ಮತ್ತು ಮ್ಯಾಗಝೀನ್‍ಗಳನ್ನು ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿನ್ನೆ ಶೋಪಿಯಾನ್‍ನ ಕೆಲ್ಲರ್‍ನಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಎನ್‍ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದರು. ಕುಪ್ವಾರದ ಹಂಡ್ವಾರದ ಯಾರೂ ಎಂಬ ಪ್ರದೇಶದಲ್ಲಿ ಇಂದು ಮುಂಜಾನೆ ಯೋಧರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾದರು ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರಗಾಮಿಗಳ ಬೇಟೆ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ