ಸುಪ್ರೀಂ ನ್ಯಾಯಮೂರ್ತಿಯಾಗಿ ಎನ್‌.ವಿ.ರಮಣ ಪ್ರಮಾಣವಚನ ಸ್ವೀಕಾರ

ನವದೆಹಲಿ : 

     ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಶನಿವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.

     ಬೆಳಿಗ್ಗೆ 11ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಮಣ ಅವರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಬೋಧಿಸಿದರು.

     ಸುಪ್ರೀಂ ಕೋರ್ಟ್ ಈ ಹಿಂದಿನ ಮುಖ್ಯನ್ಯಾಯಮೂರ್ತಿ ಎಸ್. ಎ. ಬೊಬ್ಡೆ ಶುಕ್ರವಾರ ನಿವೃತ್ತಿಗೊಂಡ ಬಳಿಕ ಈ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ರಮಣ ತುಂಬಿದ್ದಾರೆ. ಎನ್. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರೆಯಲಿದ್ದಾರೆ.

      ಸಿಜೆಐ ಶರದ್ ಅರವಿಂದ್ ಬೊಬ್ಡೆ ಅವರ ಅಧಿಕಾರಾವಧಿ ಏಪ್ರಿಲ್ 23ರಂದು ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಅವರ ಉತ್ತರಾಧಿಕಾರಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಬೊಬ್ಡೆ ಅವರಿಂದ ಶನಿವಾರ ರಮಣ ಅವರು ಅಧಿಕಾರ ವಹಿಸಿಕೊಂಡರು. ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ಸಂಪ್ರದಾಯದಂತೆ ತಮ್ಮ ನಂತರದ ಅತಿ ಹಿರಿಯ ನ್ಯಾಯಮೂರ್ತಿ ಎನ್‌ವಿ ರಮಣ ಹೆಸರನ್ನು ಮುಂದಿನ ಸಿಜೆಐ ಹುದ್ದೆಗೆ ಕಳೆದ ತಿಂಗಳು ಶಿಫಾರಸು ಮಾಡಿದ್ದರು.

     ಆಂಧ್ರ ಪ್ರದೇಶ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಯೂ ಇವರದ್ದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap