ಕಾನ್ಪುರ್:
ಶಾಲೆಯಲ್ಲಿ ತಾನು ಹೇಳಿರುವ ಮಾತು ಕೇಳಲಿಲ್ಲ ಎಂದು ಕುಪಿತಗೊಂಡ ಶಿಕ್ಷಕ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಲೆಗೈದ ಅಮಾನವೀಯ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಶಿಕ್ಷಕ ಶೈಲೇಂದ್ರ ರಜಪೂತ್ ನಿನ್ನೆ ಈ ಕೃತ್ಯವೆಸಗಿದ್ದಾನೆ. ಈ ಹಿಂದೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಕ್ಕಾಗಿ 3 ತಿಂಗಳ ಕಾಲ ಶಾಲೆಯಿಂದ ಅಮಾನತು ಶಿಕ್ಷೆ ಅನುಭವಿಸಿದ್ದ ಆರೋಪಿ ಮತ್ತೆ ಶಾಲೆಗೆ ವಾಪಸ್ ಆಗಿದ್ದ. ಇದೀಗ ಅದೇ ಕೋಪದಲ್ಲಿ ಈ ಕುಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ.
ಬಾಲಕಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಶಿಕ್ಷಕ ಮೂರು ಗುಂಡುಗಳನ್ನು ಹಾರಿಸಿದ್ದಾನೆ. ಒಂದು ಗುಂಡು ಅಪ್ರಾಪ್ತ ಬಾಲಕಿಯ ಕುತ್ತಿಗೆಗೆ ಬಡಿದು ಅವಳು ನೆಲದ ಮೇಲೆ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಆಕೆ ಸಾವನ್ನಪ್ಪಿದ್ದಾಳೆ.
ಆರೋಪಿ ಶಿಕ್ಷಕನನ್ನು ಶೈಲೇಂದ್ರ ರಜಪೂತ್ ಎಂದು ಗುರುತಿಸಲಾಗಿದೆ. ಕುಕೃತ್ಯವೆಸಗಿದ ಶಿಕ್ಷಕನನ್ನು ಮರಣದಂಡನೆ ವಿಧಿಸುವಂತೆ ಬಾಲಕಿಯ ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ