ಮಕ್ಕಳು, ಪೋಷಕರು, ಶಿಕ್ಷಕರಿಗೆ ಇಲಾಖೆಯಿಂದ ಸಹಾಯವಾಣಿ!!!

ಬೆಂಗಳೂರು :

      ಶಾಲೆಗಳ ಬಗ್ಗೆ ತಿಳಿಯಲು, ವಿದ್ಯಾರ್ಥಿಗಳ, ಶಿಕ್ಷಕರ ಸಮಸ್ಯೆ ತಿಳಿಸಲು ಸಹಾಯವಾಣಿ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.

      ಶಿಕ್ಷಣ ಇಲಾಖೆಯು ಆರಂಭಿಸುವ ಸಹಾಯವಾಣಿಗೆ ವಿದ್ಯಾರ್ಥಿಗಳು, ಪೋಷಕರು ಏನೇ ಸಮಸ್ಯೆ ಇದ್ದರೂ ದೂರಿನ ಮೂಲಕ ನೀಡಬಹುದು. ದೂರು ಪಡೆದ ಅಧಿಕಾರಿಗಳು ಸಂಬಂಧಿಸಿದವರಿಗೆ ದೂರಿನ ಬಗ್ಗೆ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದೆ.

     ಸಾರ್ವಜನಿಕ ಶಿಕ್ಷಣ ಇಲಾಖೆಯು ಮಾರ್ಚ್ 31 ರೊಳಗೆ ಈ ಸಹಾಯವಾಣಿ ಪ್ರಾರಂಭಿಸಲು ಸಿದ್ಧತೆ ನಡೆಸಿದ್ದು, ಇದರಿಂದಾಗಿ ಶಿಕ್ಷಕರು, ಮಕ್ಕಳು ಶಾಲೆಗಳ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದೆ. ಈ ಮೂಲಕ  ಶಿಕ್ಷಣ ಇಲಾಖೆಯು ಪೋಷಕರು, ಮಕ್ಕಳು ಹಾಗೂ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ಕೊಟ್ಟಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ