ಬೆಂಗಳೂರು:
ವಿಧಾನಸಭೆಯಿಂದ ವಿಧಾನ ಪರಿಷತ್ನ 7 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದೆ.
ವಿಧಾನ ಪರಿಷತ್ನ 7 ಸ್ಥಾನಗಳಿಗೆ ಇದೇ ಜೂನ್ 29 ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯೂ ಆಗಿದ್ದ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ.
ಬಿಜೆಪಿಯಿಂದ 4, ಕಾಂಗ್ರೆಸ್ ಪಕ್ಷದಿಂದ 2 ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಾಗಿದೆ.
ಸೋಮವಾರ ಸಂಜೆ ನಾಲ್ಕು ಗಂಟೆಯೊಳಗೆ ನಾಮಪತ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿತ್ತು. ಬೇರೆ ಯಾರೂ ಚುನಾವಣಾ ಕಣದಲ್ಲಿ ಉಳಿದಿರಲಿಲ್ಲ. ಹೀಗಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ವಿಶಾಲಾಕ್ಷಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Vidhan-parishad.jpg)