ಚೆನ್ನೈ :
ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ದೇಶಾದ್ಯಂತ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಲೇ ಇದೆ, ಇದು ದೇಶದಲ್ಲಿ 52 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಇನ್ನು ಈಗಾಗಲೇ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರಿಗೆ ಕೊರೋನಾ ದೃಢವಾಗಿದೆ. ಇದೀಗ ಕಾರ್ತಿ ಚಿದಂಬರಂ ಗೂ ಕೊರೋನಾ ದೃಢವಾಗಿದೆ.
ತಮಗೆ ಕರೋನವೈರಸ್ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಸೋಮವಾರ ಬೆಳಿಗ್ಗೆ ಟ್ವಿಟ್ಟರ್ ಮೂಲಕ ತಿಳಿಸಿರುವ ಕಾರ್ತಿ ಚಿದಂಬರಂ , ನಾನು ಕೊರೋನಾ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಎಂದು ಬಂದಿದೆ. ನನ್ನ ರೋಗಲಕ್ಷಣಗಳು ಸೌಮ್ಯವಾಗಿವೆ ಮತ್ತು ವೈದ್ಯಕೀಯ ಸಲಹೆಯ ಪ್ರಕಾರ ನಾನು ಹೋಮ್ ಕ್ವಾರೆಂಟೈನ್ ನಲ್ಲಿದ್ದೇನೆ . ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ವೈದ್ಯಕೀಯ ಪ್ರೋಟೋಕಾಲ್ ಅನುಸರಿಸಲು ನಾನು ಒತ್ತಾಯಿಸುತ್ತೇನೆ. ” ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/karthi-chidambaram.jpg)