ಜಮ್ಮು- ಕಾಶ್ಮೀರ:
ಶ್ರೀನಗರದಲ್ಲಿ ಪ್ರತಿಭಟನಾ ನಿರತರಾಗಿದ್ದವರನ್ನು ಚದುರಿಸಲು ಗುಂಡು ಹಾರಿಸಲಾಗಿ ಕರ್ಫ್ಯೂ ವಿಧಿಸಲಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 35ಎ ಕಲಂ ಅನ್ನು ರದ್ದುಗೊಳಿಸಿದ ಬಳಿಕ ತಣ್ಣಗಿದ್ದ ಜಮ್ಮುಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ವಿಶೇಷಾಧಿಕಾರವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಣಿವೆ ರಾಜ್ಯದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿವೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವು ಕಾಶ್ಮೀರಿಗಳು ರಸ್ತೆಗಳಿಗೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ನಿರತರಾಗಿದ್ದವರ ಮೇಲೆ ಗುಂಡು ಹಾರಿಸಿದ ಪರಿಣಾಮ 6 ಮಂದಿಯನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟಿಸುತ್ತಿದ್ದ ಯುವಕನೊಬ್ಬನ ಬೆನ್ನಟ್ಟಿ ಹೋದಾಗ ಆತ ಝೇಲಂ ನದಿಗೆ ಹಾರಿದ್ದು, ಬಳಿಕ ಆತ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಈಗಾಗಲೇ ಕಾಶ್ಮೀರ ಕಣಿವೆಯಲ್ಲಿ ಇಂಟರ್ನೆಟ್ ಸೇರಿದಂತೆ ಬಹುತೇಕ ಸೇವೆಗಳನ್ನು ಬಂದ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ