ತಿರುವನಂತಪುರ :

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಪಿಣರಾಯ್ ವಿಜಯನ್ ನೇತೃತ್ವದ ಕೇರಳ ಸರ್ಕಾರ ಮೊಕದ್ದಮೆ ಹೂಡಿದೆ.
ಕೇರಳದ ಎಲ್ಡಿಎಫ್ ಸರ್ಕಾರ ಪೌರತ್ವ ಕಾಯ್ದೆ ಮತ್ತು ಪಾಸ್ಪೋರ್ಟ್ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯ ನಿಯಮಗಳನ್ನು ಪ್ರಶ್ನಿಸಿದ್ದು, ಸಿಎಎ ಸಂವಿಧಾನದ 14, 21 ಮತ್ತು 25 ನೇ ವಿಧಿ ಮತ್ತು ಭಾರತದಲ್ಲಿ ಜಾತ್ಯತೀತತೆಯ ಮೂಲ ರಚನೆಯ ಉಲ್ಲಂಘನೆ ಮಾಡುತ್ತದೆ. ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ಉಂಟುಮಾಡುವ ಈ ಅಧಿನಿಯಮವನ್ನು ರದ್ದುಗೊಳಿಸಬೇಕು ಎಂದು ಕೇರಳ ಸರ್ಕಾರ ಮನವಿಯಲ್ಲಿ ಕೋರಿದೆ.
ಇದೀಗ ಕೇರಳ ಸಿಎಂ ವಿಜಯನ್ ದೇಶದ 11 ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿವಾದಾತ್ಮಕ ಕಾನೂನಿನ ವಿರುದ್ಧ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯನ್ನು ರಕ್ಷಿಸಲು ಏಕತೆಗಾಗಿ ಒತ್ತಾಯಿಸಬೇಕು. ಇದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಈಗಾಗಲೇ ಸಿಎಎ ವಿರುದ್ಧ ಹಲವಾರು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ ಸಿಎಎ ವಿರುದ್ಧ ನಿರ್ಣಯವನ್ನು ಮಂಡಿಸಿದ ಮೊದಲ ರಾಜ್ಯ ವಿಧಾನಸಭೆಯು ಕೇರಳ. ಇದರೊಂದಿಗೆ, ಪೌರತ್ವ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೊದಲ ರಾಜ್ಯವಾಗಿ ಕೇರಳ ಹೊರ ಹೊಮ್ಮಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








