ತಿರುವನಂತಪುರಂ:
ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಹಿರಿಯ ಕ್ಯಾಥೋಲಿಕ್ ಪಾದ್ರಿ ಫ್ರಾಂಕೊ ಮುಳಕ್ಕಲ್ ಅವರಿಗೆ ಕೇರಳ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಅತ್ಯಾಚಾರ ಆರೋಪಿ ಕ್ರೈಸ್ತ ಸನ್ಯಾಸಿ ಬಂಧನ
ಕ್ರೈಸ್ತ ಸನ್ಯಾಸಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿದ್ದ 54 ವರ್ಷ ವಯಸ್ಸಿನ ಫ್ರಾಂಕೋ ಮುಳಕ್ಕಲ್ ಅವರನ್ನು ಸೆ.21 ರಂದು ಬಂಧಿಸಲಾಗಿತ್ತು. ಈ ಹಿಂದೆ ಜಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಜಾಮೀನಿಗಾಗಿ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿಷಪ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಷಪ್ ಕೇರಳಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಅವರ ಪಾಸ್ಪೋರ್ಟ್ನ್ನು ಕೋರ್ಟ್ಗೆ ಸಲ್ಲಿಸುವಂತೆ ಕೇಳಿದೆ. ಅಂತಿಮವಾಗಿ ಪೊಲೀಸರು ವರದಿ ಸಲ್ಲಿಸುವವರೆಗೆ ಎರಡು ವಾರಗಳಿಗೊಮ್ಮೆ ತನಿಖಾಧಿಕಾರಿಗಳಿಗೆ ವರದಿ ಮಾಡಿಕೊಳ್ಳುವಂತೆ ಷರತ್ತು ವಿಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/franco.gif)