ಶ್ರೀನಗರ:
ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ದಾಟಿ ಭಾರತದ ಗಡಿಯೊಳಗೆ ನುಸುಳಿದ್ದ ಪಾಕಿಸ್ತಾನ ಸೇನೆಯ ಬಾರ್ಡರ್ ಆ್ಯಕ್ಷನ್ ಟೀಂನ ಇಬ್ಬರು ಶಂಕಿತ ಯೋಧರನ್ನ ಭಾರತೀಯ ಯೋಧರು ಬೇಟೆಯಾಡಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಆರಂಭದಲ್ಲಿ ಇವರು ಉಗ್ರರು ಎಂದು ಶಂಕೆ ವ್ಯಕ್ತಪಡಿಸಲಾಗಿತ್ತಾದ್ರೂ, ಭಾರತೀಯ ಯೋಧರ ವೇಷ ಧರಿಸಿದ್ದರಿಂದ ಅಲ್ಲಿನ ಯೋಧರೇ ಎಂದು ತಿಳಿದು ಬಂದಿದೆ
ಪಾಕ್ ಯೋಧರ ಮೃತದೇಹ ವಶಕ್ಕೆ ಪಡೆಯುವಂತೆ ಶೀಘ್ರದಲ್ಲಿಯೇ ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಪಾಕ್ ಸೈನಿಕರು ಭಾರತೀಯ ಸೇನೆಯನ್ನ ಟಾರ್ಗೆಟ್ ಮಾಡಿ ದಾಳಿ ನಡೆಸುತ್ತಿದ್ದು, ಅವರನ್ನ ಹಿಮ್ಮೆಟ್ಟಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಇದೀಗ ಗಡಿಯೊಳಗೆ ಬಂದು ದೊಡ್ಡ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
