ನವದೆಹಲಿ :
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಬಹುಭಾಷಾ ನಟಿ ಖುಷ್ಬೂ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿ.ಟಿ. ರವಿ ಸಮ್ಮುಖದಲ್ಲಿ ನಟಿ ಖುಷ್ಬೂ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ತಮಿಳುನಾಡಿನಲ್ಲಿ 2021 ರಲ್ಲಿ ವಿಧಾನಸಭೇ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖುಷ್ಬೂ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
Delhi: Khushboo Sundar joins Bharatiya Janata Party (BJP).
She had resigned from Congress earlier today. pic.twitter.com/Q6VBlFD6tM
— ANI (@ANI) October 12, 2020
2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಕಾಂಗ್ರೆಸ್ ಸೇರಿಕೊಂಡಿದ್ದರು. ಈ ನಡುವೆ ಖುಷ್ಬೂ ಬಿಜೆಪಿ ಸೇರುತ್ತಾರೆ ಅನ್ನುವ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿತ್ತು. ಖುಷ್ಬೂ ಈ ವಿಚಾರವನ್ನು ತಳ್ಳಿ ಹಾಕಿದ್ದರು. ಆದರೆ ಇದೀಗ ವದಂತಿಯೇ ಸತ್ಯವಾಗಿದೆ.
ತಮಿಳುನಾಡಿನಲ್ಲಿ ಕೇಸರಿ ಪಕ್ಷ ತನ್ನ ಬಲ ವೃದ್ಧಿಸಿಕೊಳ್ಳುತ್ತಿದೆ. ಈಗಾಗಲೇ ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬೆನ್ನಲ್ಲೇ ಇದೀಗ ನಟಿ ಖುಷ್ಬೂ ಬಿಜೆಪಿ ಸೇರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
