ಟ್ರ್ಯಾಕ್ಟರ್ ಪರೇಡ್ : ರೈತರ ಮೇಲೆ ಲಾಠಿಚಾರ್ಜ್, ಆಶ್ರುವಾಯು ಪ್ರಯೋಗ..!

ನವದೆಹಲಿ : 

     ರಾಷ್ಟ್ರ ರಾಜಧಾನಿಯಲ್ಲ ಪೊಲೀಸರ ಸೂಚನೆಗಳನ್ನು ಉಲ್ಲಂಘಿಸಿ ಕೇಂದ್ರದ ಕೃಷಿ ನಿಯಮ ವಿರೋಧಿಸಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ಮಾಡಲಾಯಿತು.

     ದೆಹಲಿಗೆ ಪಂಜಾಬ್ ಹಾಗೂ ಹರಿಯಾಣದಿಂದ ಸುಮಾರು 2 ಲಕ್ಷ ಟ್ರ್ಯಾಕ್ಟರ್‍ಗಳಲ್ಲಿ ಆಗಮಿಸಿದ ರೈತರು ದೆಹಲಿಯ ಗಡಿ ಭಾಗಗಳಲ್ಲಿ 42 ಕಿ.ಮೀ.ವರೆಗೂ ಸಾಲುಗಟ್ಟಿ ನಿಂತಿದ್ದರು. ಕೆಲವು ಕಡೆ ರೈತರನ್ನು ತಡೆಯುವ ಪ್ರಯತ್ನಗಳು ನಡೆದವು. ಆದರೆ, ಇದ್ಯಾವುದಕ್ಕೂ ಲೆಕ್ಕಿಸದೆ ಪೊಲೀಸರ ಬ್ಯಾರಿಕೇಡ್, ಭದ್ರತೆಗಳನ್ನು ಮೀರಿ ರೈತರು ದೆಹಲಿಯತ್ತ ಮುನ್ನುಗ್ಗಿದರು.

      ರಾಜಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ಮುಗಿದ ನಂತರ ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಅಂತ ರೈತರ ಮನವೊಲಿಸಲು ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು. ಆದರೆ ಕೆಲ ರೈತರು ಹೊರ ವರ್ತುಲ ರಸ್ತೆ ಕಡೆಗೆ ತೆರಳದೆ ಪೊಲೀಸ್ ಬ್ಯಾರಿಕೇಡ್ ಗಳನ್ನು ಮುರಿದು ಒಳನುಗ್ಗಿ ಆಕ್ರೋಶ ವ್ಯಕ್ತಪಡಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವೊಮ್ಮೆ ಪೊಲೀಸರ ಸೂಚನೆಗಳನ್ನು ಉಲ್ಲಂಘಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ಮಾಡಲಾಯಿತು. ಇದೇ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ಲಾಠಿ ಪ್ರಹಾರ ನಡೆಯುತ್ತಿದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap