ಇಂದಿನಿಂದ ದೇಶದ ಹಲವು ರಾಜ್ಯಗಳಲ್ಲಿ ಮದ್ಯ ಮಾರಾಟ!!

ಗುವಾಹಟಿ :

      ದೇಶಾದ್ಯಂತ ಲಾಕ್ ಡೌನ್ ಅವಧಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ.

      ಅಸ್ಸಾಂನಲ್ಲಿ ಮದ್ಯ ಮಾರಾಟದ ಅಂಗಡಿಗಳು, ಸಗಟು ಮಾರಾಟ ಕೇಂದ್ರಗಳು, ಮದ್ಯ ತಯಾರಿಕಾ ಘಟಕಗಳು ಹಾಗೂ ಬಾಟಲಿಂಗ್‌ ಘಟಕಗಳು ಇಂದಿನಿಂದ ನಿತ್ಯ 7 ಗಂಟೆ ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಪಕ್ಕದ ಮೇಘಾಲಯದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೂ ರಿಟೇಲ್‌ ಮದ್ಯ ಮಾರಾಟ ಕೇಂದ್ರಗಳು, ಅಂಗಡಿಗಳು ಹಾಗೂ ಸಂಗ್ರಹ ಘಟಕಗಳು ಕಾರ್ಯನಿರ್ವಹಿಸಲಿವೆ.

united breweirs share price: United Breweries gains 5% as Heineken ...

      ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಶುಚಿತ್ವ ಕಾಪಾಡುವುದಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದು, ಇನ್ನು ಕರ್ನಾಟಕದಲ್ಲಿ ಎಂಎಸ್‌ಐಎಲ್ ಮದ್ಯದ ಅಂಗಡಿಯನ್ನು ತೆರೆಯಲು ಸಿದ್ಧತೆ ಮಾಡಿಕೊಂಡಿದೆ.

 

      ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯ ಅಬಕಾರಿ ಇಲಾಖೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಏಪ್ರಿಲ್ 15ರಿಂದ ರಾಜ್ಯದಲ್ಲಿನ ಎಂಎಸ್‌ಐಎಲ್ ಅಂಗಡಿಗಳನ್ನು ಒಪನ್ ಮಾಡುವ ಮೂಲಕ, ಮದ್ಯ ವಿತರಿಸಲು ಅನುಕೂಲ ಮಾಡಿಕೊಡುವಂತ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದೆ. ಈ ಪ್ರಸ್ತಾವನೆಗೆ ಸಿಎಂ ಒಕೆ ಅಂದ್ರೇ ಏಪ್ರಿಲ್ 15ರಿಂದ ರಾಜ್ಯದಲ್ಲಿ ಎಂಎಸ್‌ಐಎಲ್ ಮದ್ಯದ ಅಂಗಡಿ ಒಪನ್ ಆಗಲಿದೆ.

 

 

Recent Articles

spot_img

Related Stories

Share via
Copy link
Powered by Social Snap