ರಾಷ್ಟ್ರ ರಾಜಧಾನಿ ಇಂದಿನಿಂದ ಒಂದು ವಾರ ಸಂಪೂರ್ಣ ಲಾಕ್‌ಡೌನ್!!

ನವದೆಹಲಿ :

     ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಲಾಕ್​ಡೌನ್ ವಿಧಿಸಲಾಗುವುದು ಎಂದು ಸಿಎಂ ಅರವಿಂದ್​ ಕೇಜ್ರಿವಾಲ್ ಘೋಷಿಸಿದ್ದಾರೆ. 

     ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣಗಳಿಂದ ಇಂದು ರಾತ್ರಿಯಿಂದ ಏಪ್ರಿಲ್ 26 ರವರಗೆ ಒಂದು ವಾರ ಕಾಲ ಲಾಕ್‌ಡೌನ್ ವಿಧಿಸಲಾಗಿದೆ. 

      ಮದುವೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಆದರೆ 50 ಜನರಿಗೆ ಮಾತ್ರ ಅವಕಾಶವಿರುತ್ತದೆ. ಇನ್ನುಳಿದಂತೆ ತುರ್ತು ಸೇವೆಗಳು ಲಭ್ಯವಿರಲಿವೆ.  ಖಾಸಗಿ ಕಚೇರಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ವಲಸೆ ಕಾರ್ಮಿಕರ ಕುರಿತು ಚರ್ಚೆ ನಡೆಸಲಾಗಿದ್ದು, ಅವರಿಗೆ ಯಾವುದೇ ಕೆಟ್ಟ ಅನುಭವವಾಗದಂತೆ ನೋಡಿಕೊಳ್ಳಲಾಗುತ್ತದೆ.

     ಈ ಆರು ದಿನಗಳಲ್ಲಿ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ, ಈ ಲಾಕ್‌ಡೌನ್ ಸಂದರ್ಭವನ್ನು ಆಮ್ಲಜನಕ ಶೇಖರಣೆ, ಔಷಧಗಳ ಶೇಖರಣೆಗೆ ಬಳಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಲಾಕ್‌ಡೌನ್ ನಿಯಮ ಪಾಲಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap