ಏ.30 ರವರೆಗೆ ಭಾರತ ಲಾಕ್ ಡೌನ್ ವಿಸ್ತರಣೆ!!

ನವದೆಹಲಿ :

       ದೇಶದಲ್ಲಿ ಈಗಾಗಲೇ ಕೊರೊನಾ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಾದ್ಯಂತ ಎರಡನೇ ಹಂತದ ಲಾಕ್‍ಡೌನ್ ಮುಂದುವರಿಕೆಯಾಗಲಿದೆ.

      ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಲಾಕ್‌ಡೌನ್‌ ವಿಸ್ತರಣೆ ಕುರಿತಾಗಿ ವಿಡಿಯೋ ಸಂವಾದ ಮೂಲಕ ಮಹತ್ವದ ಚರ್ಚೆ ನಡೆಸಿದರು.  ಈ ವೇಳೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಏಪ್ರಿಲ್ 14ರ ನಂತ್ರವೂ ಲಾಕ್ ಡೌನ್ ವಿಸ್ತರಣೆ ಮಾಡುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಲಾಕ್ ಡೌನ್ ಎರಡು ವಾರಗಳ ಕಾಲ ಏಪ್ರಿಲ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ.

      ಮಾ.24ರಿಂದ ಭಾರತಾದ್ಯಂತ ಜಾರಿಯಲ್ಲಿರುವ 21 ದಿನಗಳ ಲಾಕ್‍ಡೌನ್ ಏ.14ರಂದು ಕೊನೆಗೊಳ್ಳಲಿದ್ದು, ಮತ್ತೆ ಏ.30ರವರೆಗೆ ಎರಡನೇ ಹಂತದ ಲಾಕ್‍ ಡೌನ್ ಪ್ರಾರಂಭವಾಗಲಿದೆ. ಇನ್ನು ದೇಶದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 7,447 ದಾಟಿದೆ. 239 ಜನರು ಸಾವನ್ನಪ್ಪಿದ್ದು, ಇನ್ನೂ ಕೂಡ ಕೋರಾನ ಸೊಂಕಿತರ ಸಂಖ್ಯೆಯಲ್ಲಿ ಇಳಿಮುಖವಾದ ಕಾರಣ ಲಾಕ್‌ಡೌನ್‌ ಅನ್ನು ಮುಂದುವರೆಸಬೇಕಾದ ಅನಿವಾರ್ಯತೆ ಇದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap