ಬೆಂಗಳೂರು :
ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಇದೀಗ ಬಿಜೆಪಿ ಸಹ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಿಲೀಸ್ ಮಾಡಿದೆ.
ಸ್ಟಾರ್ ಪ್ರಚಾರಕರು:
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್, ರಾಜ್ಯ ಸಹ ಉಸ್ತುವಾರಿ ಪುರಂದರೇಶ್ವರಿ, ಚುನಾವಣಾ ಉಸ್ತುವಾರಿ ಕಿರಣ್ ಮಹೇಶ್ವರಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನಾವಿಸ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ನಾಯಕರಾದ ಬಿ.ಎಲ್. ಸಂತೋಷ್, ಎಸ್.ಎಂ. ಕೃಷ್ಣ, ಶ್ರೀನಿವಾಸ್ ಪ್ರಸಾದ್, ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು, ಸಿ.ಟಿ. ರವಿ, ಅರವಿಂದ್ ಲಿಂಬಾವಳಿ, ವಿ. ಸೋಮಣ್ಣ, ಎಸ್. ಸುರೇಶ್ ಕುಮಾರ್, ನಟರಾದ ಜಗ್ಗೇಶ್, ಶ್ರುತಿ, ತಾರಾ ಅನುರಾಧ, ಮಾಳವಿಕಾ ಅವಿನಾಶ್ ಮತ್ತಿತರರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಏಪ್ರಿಲ್ 18 ಮತ್ತು 23ರಂದು ರಾಜ್ಯದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಹೆಚ್ಚು ದಿನಗಳಿಲ್ಲದ ಹಿನ್ನೆಲೆಯಲ್ಲಿ ಪ್ರಚಾರಕಾರ್ಯವೂ ಬಿರುಸುಗೊಳ್ಳುತ್ತಿದೆ. ಈಗಾಗಲೇ ಬಿಜೆಪಿ 36 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ