ಮುಂಬೈ:
ರಾಜ್ಯ ಬಿಜೆಪಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸದಲ್ಲಿರುವುದರಿಂದ 5 ಸಾವಿರಕ್ಕೂ ಅಧಿಕ ಲಡ್ಡುಗಳು ಹಾಗೂ ಅನೇಕ ಹೂವಿನ ಮಾಲೆಗಳಿಗೆ ಆರ್ಡರ್ ನೀಡಿದೆ.
ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿಗಂತೂ ಗೆಲುವು ತಮ್ಮದೇ ಎಂಬ ಭರವಸೆ ಬಲವಾಗಿಯೇ ಇದೆ.
Mumbai: Counting of votes for #MaharashtraAssemblyElections starts soon, ladoos ready at BJP state office pic.twitter.com/3GF6ss9SSU
— ANI (@ANI) October 24, 2019
ಮತ ಎಣಿಕೆಯ ಪ್ರಕ್ರಿಯೆಯನ್ನು ನೇರ ಪ್ರಸಾರದಲ್ಲಿ ನೋಡಲು ದೊಡ್ಡ ಟಿವಿ ಪರದೆಗಳನ್ನು ಹಾಕಿರುವ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗೆದ್ದ ಬಳಿಕ ಸಂಭ್ರಮಾಚರಣೆ ಮಾಡಲು, ಸಿಹಿ ವಿತರಣೆಗಾಗಿ ಈಗಾಗಲೇ 5000 ಲಾಡುಗಳನ್ನು ತಯಾರಿಸಲಾಗಿದೆ. ಅಲ್ಲದೆ ಹೂವಿನ ಹಾರಗಳನ್ನೂ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಲ್ಲದೆ ಬೆಳಗ್ಗೆ 10 ಗಂಟೆಗೆ ಪಕ್ಷದ ಮಂತ್ರಾಲಯ ಬಳಿ ಇರುವ ಕಚೇರಿ ಅಥವಾ ದಕ್ಷಿಣ ಮುಂಬೈನ ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಲಿದ್ದಾರೆ ಎಂದೂ ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
