ಮುಂಬೈ :
ರಾಸಾಯನಿಕ ಕಾರ್ಖಾನೆ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನ ತಾರಾಪುರ ಪ್ರದೇಶದಲ್ಲಿ ನಡೆದಿದೆ.
Two killed in a cylinder blast at a chemical factory in Palghar, Maharashtra. More details awaited.
— ANI (@ANI) April 13, 2020
ಬೆಳಿಗ್ಗೆ 11.30 ಕ್ಕೆ ಹೊಗೆ ಕಾಣಿಸಿಕೊಂಡಿದ್ದು, ಸ್ಫೋಟ ಸಂಭವಿಸಿದಾಗ ತಾರಾಪುರ ರಾಸಾಯನಿಕ ವಲಯದಲ್ಲಿರುವ ಸ್ಯಾನಿಟೈಸರ್ ಮತ್ತು ಹ್ಯಾಂಡ್ ವಾಶ್ ಘಟಕದಲ್ಲಿ 66 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ನಂತರ ದೊಡ್ಡ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ಗಳ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಅಗತ್ಯ ವಸ್ತುವನ್ನು ತಯಾರಿಸಲು ಕೊರೊನಾವೈರಸ್ ಲಾಕ್‌ಡೌನ್ ಮಧ್ಯೆ ಕೆಲಸ ಮಾಡಲು ಘಟಕಕ್ಕೆ ಅನುಮತಿ ನೀಡಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
