ಕಾರ್ಖಾನೆಯಲ್ಲಿ ಬೆಂಕಿ ಅವಘಡ : 8 ಮಂದಿ ಸಜೀವ ದಹನ!!

ಮುಂಬೈ: 

      ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ 8 ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯಲ್ಲಿನ ಬೋಯಿಸರ್​ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ.

     ಘಟಕದಲ್ಲಿದ್ದ ರಿಯಾಕ್ಟರ್‌ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಪುರುಷ ಸಿಬಂದಿ. ಸ್ಫೋಟದ ನಂತರ ಘಟಕದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದು, ಅದರಲ್ಲಿ ಇನ್ನಿತರ ಸಿಬಂದಿ ಸಿಲುಕಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬಂದಿ ತಿಳಿಸಿದ್ದಾರೆ.

      ಈ ಘಟನೆಯಲ್ಲಿ ಕೆಲವರಿಗೆ ತೀವ್ರ ಗಾಯಗಳಾಗಿದ್ದು ,ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link