ಮದ್ಯ ಮಾರಾಟದ ಬದಲು ಹೋಂ ಡಿಲೆವರಿಗೆ ಸುಪ್ರೀಂ ಸೂಚನೆ!!

ನವದೆಹಲಿ :

      ಸಾಮಾಜಿಕ ಅಂತರದ ಹಿತದೃಷ್ಟಿಯಿಂದ ಎಲ್ಲಾ ರಾಜ್ಯಗಳು ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವ ಬದಲು ಹೋಂ ಡೆಲಿವರಿ ಮಾಡುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

      ಲಾಕ್ ಡೌನ್ ಸಡಿಲಿಕೆ ಮಾಡಿದ ಬಳಿಕ ದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ, ಮದ್ಯ ಖರೀದಿಸಲು ಮದ್ಯಪ್ರಿಯರು ಗಂಟೆಗಟ್ಟಲೇ ಕ್ಯೂ ನಲ್ಲಿ ನಿಲ್ಲುತ್ತಿದ್ದಾರೆ.  

       ಈ ಕುರಿತಂತೆ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರಿದ್ದ ನ್ಯಾಯಪೀಠ ಇಂದು ಅರ್ಜಿಯ ವಿಚಾರಣೆ ನಡೆಸಿದರು. ಅಲ್ಲದೇ, ಸುಪ್ರೀಂಕೋರ್ಟ್ ಈ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ನಿಯಮ ಪಾಲಿಸಲು ಆಯಾ ರಾಜ್ಯಗಳು ಗ್ರಾಹಕರ ಮನೆ ಬಾಗಿಲಿಗೆ ಮದ್ಯ ಪೂರೈಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap