ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ; 17 ಮಂದಿ ಸಾವು!!

ಔರಂಗಾಬಾದ್: 

       ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹಳಿ ಮೇಲೆ ಹರಿದು 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.

       ಲಾಕ್ ಡೌನ್ ಕಾರಣದಿಂದಾಗಿ ಈ ವಲಸೆ ಕಾರ್ಮಿಕರು ಛತ್ತಿಸ್ ಗಡ್ ಗೆ ಹಿಂದಿರುಗುತ್ತಿದ್ದರು. ರೈಲ್ವೆ ಹಳಿಗಳ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದ ಈ ಸಂದರ್ಭದಲ್ಲಿ ಕಾರ್ಮಿಕರು ಬಳಲಿಕೆಯಿಂದ ನಿದ್ರೆಗೆ ಜಾರಿದ್ದಾರೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಮುಂಜಾನೆ ವೇಳೆಗೆ ಮಲಗಿದ್ದವರು ಮೇಲೆ ರೈಲು ಹರಿದಿದ್ದು ದುರಂತಕ್ಕೆ ಕಾರಣವಾಗಿದೆ. 

      ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಸಚಿವಾಲಯ, ಹಳಿ ಮೇಲೆ ಕಾರ್ಮಿಕರು ಮಲಗಿರುವುದನ್ನು ಕಂಡು ಗೂಡ್ಸ್ ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಆಕಸ್ಮಿಕವಾಗಿ ರೈಲು ಕಾರ್ಮಿಕರ ದೇಹದ ಮೇಲೆ ಹರಿದುಹೋಯಿತು. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ.

     ಘಟನೆಯಲ್ಲಿ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದು, ದಕ್ಷಿಣ ಸೆಂಟ್ರಲ್ ರೈಲ್ವೆ 17 ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. 

      ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಅವರು ಹೇಳಿದ್ದಾರೆ.

5 ಲಕ್ಷ ಪರಿಹಾರ :

     ಘಟನೆಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ದುರಂತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ರೈಲ್ವೆ ಇಲಾಖೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap