ನವದೆಹಲಿ:
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಇಬ್ಬರು ಟ್ರಕ್ ಚಾಲಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ.
ರಾಜಸ್ಥಾನದ ಮೊಹಮ್ಮದ್ ಇಲಿಯಾಸ್ ಮತ್ತು ಪಂಜಾಬ್‌ನ ಜೀವನ್ ಮೃತ ಚಾಲಕರು. ದಾಳಿಯಲ್ಲಿ ಮತ್ತೊಬ್ಬ ಟ್ರಕ್ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಚಾಲಕರು ನಿರ್ಜನ ಪ್ರದೇಶಕ್ಕೆ ತೆರಳಿದ್ದು, ಅಲ್ಲಿಗೆ ಹೋಗುವ ಬಗ್ಗೆ ನಮಗೆ ಮಾಹಿತಿ ನೀಡಿರಲಿಲ್ಲ, ಎಂದು ಭದ್ರತಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ 10 ದಿನಗಳಲ್ಲಿ ಟ್ರಕ್ ಚಾಲಕರನ್ನು ಉಗ್ರರು ಕೊಂದ ಮೂರನೇ ಪ್ರಕರಣ ಇದಾಗಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಕೂಡಲೇ ಈ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ