ಸ್ಫೋಟಕ ಮಾಹಿತಿ : ಪುಲ್ವಾಮ ದಾಳಿ ಯಶಸ್ವಿ ; ಮತ್ತೊಂದು ದಾಳಿಗೆ ಸಜ್ಜು!!

ಶ್ರೀನಗರ :

Related image

     ಪುಲ್ವಾಮಾ ದಾಳಿಯಲ್ಲಿ ಯಶಸ್ಸು ಕಂಡಿರುವ ಉಗ್ರರು ಮತ್ತೊಂದು ಅನಾಹುತಕಾರಿ ದಾಳಿ ನಡೆಸಲು ಯೋಜನೆ ರೂಪಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.

      44 ಮಂದಿ ಭಾರತೀಯ ಯೋಧರನ್ನ ಬಲಿ ಪಡೆದ ಪುಲ್ವಾಮಾ ದಾಳಿ ಜಸ್ಟ್ ಟ್ರೇಲರ್ ಆಗಿದ್ದು, ಭಾರತದ ಸೇನೆಯ ಮೇಲೆ ಮತ್ತೆ ಭೀಕರ ದಾಳಿಗೆ ಜೈಶ್ ಇ ಮೊಹಮ್ಮದ್ ಸಂಚು ರೂಪಿಸುತ್ತಿದೆ ಎಂಬ ಮಾಹಿತಿ ಇದೀಗ ಗುಪ್ತಚರ ಇಲಾಖೆಯಿಂದ ತಿಳಿದುಬಂದಿದೆ.

      ಡಿಸೆಂಬರ್‍ನಲ್ಲೇ ಜಮ್ಮು-ಕಾಶ್ಮೀರಕ್ಕೆ ನುಸುಳಿರುವ ಜೈಶ್ ಇ ಮೊಹಮ್ಮದ್‍ ನ 21 ಮಂದಿ ಉಗ್ರರು, ಒಂದು ದಾಳಿ ಕಾಶ್ಮೀರದಲ್ಲಿ ಹಾಗೂ ಉಳಿದೆರಡು ದಾಳಿಯನ್ನು ಭಾರತದ ಬೇರೆ ಕಡೆಗಳಲ್ಲಿ ಎಸಗಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. 

      ಅಲ್ಲದೇ ಜೆಇಎಂ ಪುಲ್ವಾಮಾ ದಾಳಿಯ ಸಿದ್ಧತೆಯ ವೀಡಿಯೊವನ್ನು ಕೂಡಾ ಇಷ್ಟರಲ್ಲೇ ಬಿಡುಗಡೆ ಮಾಡಲಿದೆ ಎಂದು ಭದ್ರತಾ ಪಡೆ ಮೂಲಗಳು ಹೇಳಿವೆ.

      ಪಾಕಿಸ್ತಾನದಲ್ಲಿರುವ ಜೆಇಎಂ ನಾಯಕರು ಮತ್ತು ಕಾಶ್ಮೀರದಲ್ಲಿರುವ ಉಗ್ರರ ನಡುವೆ ಫೆಬ್ರವರಿ 16 ಮತ್ತು 17ರಂದು ನಡೆದ ಸಂಭಾಷಣೆಯನ್ನು ಕದ್ದಾಲಿಕೆ ಮಾಡಿದಾಗ ಈ ಅಂಶ ತಿಳಿದುಬಂದಿದೆ ಎಂದು ಗುಪ್ತಚರ ವಿಭಾಗದ ಮೂಲಗಳು ತಿಳಿಸಿರುವುದು ವರದಿಯಾಗಿದೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap