ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ಮಿಥಾಲಿ ರಾಜ್ ವಿದಾಯ!!!

ನವದೆಹಲಿ: 

       ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ವಿದಾಯ ಘೋಷಿಸಿದ್ದಾರೆ.

      2006ರಿಂದ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ ನಂತರ  2021ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಪಂದ್ಯಕ್ಕಾಗಿ ನನ್ನ ಸಾಮರ್ಥ್ಯವನ್ನು ಬಳಿಸಿ ಸಜ್ಜಾಗಬೇಕಿದೆ. ಅದಕ್ಕಾಗಿ ನಾನು ವಿದಾಯದ ನಿರ್ಧಾರ ತೆಗೆದುಕೊಂಡೆ ಎಂದು ಮಿಥಾಲಿ ಹೇಳಿಕೆ ನೀಡಿದ್ದಾರೆ.

      ವಿಶ್ವಕಪ್ ಗೆಲ್ಲುವುದು ನನ್ನ ಕನಸು. ಅದಕ್ಕಾಗಿ ನಾನು ನನ್ನಿಂದಾದ ಪ್ರಯತ್ನ ಮಾಡುತ್ತಿದ್ದೇನೆ. ನಿರಂತರ ಬೆಂಬಲ ನೀಡಿದ ಬಿಸಿಸಿಐಗೆ ನನ್ನ ಧನ್ಯವಾದಗಳು. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವ ಟಿ20 ತಂಡಕ್ಕೆ ನನ್ನ ಶುಭಕಾಮನೆಗಳು  ಎಂದು ಮಿಥಾಲಿ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

     ಕೆಲ ದಿನಗಳ ಹಿಂದೆ ಸಂದರ್ಶನವೊಂದರಲ್ಲಿ ಮಿಥಾಲಿ ವಿದಾಯ ಮಾತುಗಳನ್ನಾಡಿದ್ದರು. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಗೆ ನಾನು ಲಭ್ಯವಿರುವುದಿಲ್ಲ ಎಂದು ಮಿಥಾಲಿ ಸ್ಪಷ್ಟಪಡಿಸಿದ್ದರು.

      ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ 89 ಪಂದ್ಯಗಳನ್ನಾಡಿರುವ ಮಿಥಾಲಿ 37.5 ಸರಾಸರಿಯೊಂದಿಗೆ 2364 ರನ್ ಗಳಿಸಿದ್ದು, ಅತೀ ಹೆಚ್ಚು ರನ್ ದಾಖಲಿಸಿದ ಕ್ರೀಡಾಪಟು ಆಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap