ಪ್ರಧಾನಿ ಮೋದಿಯಿಂದ ನಾಮಪತ್ರ ಸಲ್ಲಿಕೆ!

ವಾರಣಾಸಿ:

      ದೇಶದ ಪುರಾತನ ನಗರ ಎಂದೇ ಹೆಸರು ವಾಸಿಯಾಗಿರುವ ವಾರಣಾಸಿಯಿಂದಲೇ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದು, ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

     ನಾಮಪತ್ರ ಸಲ್ಲಿಕೆಗೂ ಮುನ್ನ ಬೂತ್‌ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ. ಸುಮಾರು 11 ಗಂಟೆ ವೇಳೆಗೆ ನಗರದ ಕಾಲ ಭೈರವ ದೇವಾಲಯಕ್ಕೆ ಭೇಟಿ ನೀಡಿದ ಮೋದಿ ನಂತರ ನಾಮಪತ್ರ ಸಲ್ಲಿಸಿದ್ದಾರೆ.

      ಎನ್ ಡಿಎ ಮೈತ್ರಿಕೂಟದ ನಾಯಕರಾದ ಜೆಡಿಯು ನಾಯಕ ನಿತೀಶ್ ಕುಮಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್, ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎಲ್ ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್, ಎಐಎಡಿಎಂಕೆ ನಾಯಕರೂ ಸೇರಿದಂತೆ ಹಲವು ಗಣ್ಯರು ಮೋದಿ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

      ಎನ್​ಡಿಎ ಮೈತ್ರಿ ಪಕ್ಷಗಳಲ್ಲದೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ನಿತೀನ್ ಗಡ್ಕರಿ, ಪಿಯೂಶ್ ಗೋಯಲ್, ಬಿಜೆಪಿ ಮುಖಂಡ ಹೇಮಂತ್ ಬಿಸ್ವಾ ಶರ್ಮಾ ಮೂಂತಾದವರು ಕೂಡ ಉಪಸ್ಥಿತರಿದ್ದರು.ಈ ಮೂಲಕ ಎನ್ ಡಿಎ ಮೈತ್ರಿಕೂಟದ ಶಕ್ತಿ ಪ್ರದರ್ಶನವೂ ನಡೆಯಲಿದೆ.

       ವಾರಣಾಸಿ ಕ್ಷೇತ್ರದಲ್ಲಿ ಕೊನೆಯ ಹಂತದಲ್ಲಿ ಅಂದರೆ ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ.

      ಗುರುವಾರ ಏಳು ಕಿಮೀ. ರೋಡ್ ಶೋ ನಡೆಸಿದ್ದ ನರೇಂದ್ರ ಮೋದಿ, ಸಂಜೆ ದಶಾಶ್ವಮೇಧದಲ್ಲಿ ತಮ್ಮ ರೋಡ್ ಶೋಗೆ ಮಂಗಳ ಹಾಡಿ, ಗಂಗಾರತಿಯಲ್ಲಿ ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ