ದೆಹಲಿ:
‘ನಮ್ಮ ನಾಡಿನ ಸೈನಿಕರನ್ನು ಬಲಿ ತೆಗೆದುಕೊಂಡ ರಕ್ತದ ಪ್ರತಿ ಹನಿಗೂ ಪ್ರತೀಕಾರ ಪಡೆಯುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ನಡೆದ ಪಾಕಿಸ್ತಾನದ ಹೇಯಕೃತ್ಯದ ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ವಿರುದ್ಧ ಸಂಚು ಮಾಡುವವರು ಯಾವತ್ತೂ ಸಫಲರಾಗಲ್ಲ. ಈ ಸಮಯದಲ್ಲಿ ತಾಳ್ಮೆ ಅವಶ್ಯಕ. ನನಗೆ ತಿಳಿದಿದೆ ಈ ಘಟನೆಯಿಂದ ದೇಶದ ಜನರು ಆಕ್ರೋಶಗೊಂಡಿದ್ದಾರೆ, ಎಲ್ಲರ ರಕ್ತ ಕುದಿಯತೊಡಗಿದೆ. ಇದರ ಹಿಂದೆ ಯಾರಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಿಯೇ ಆಗುತ್ತದೆ ಎಂದು ನಾನು ಭರವಸೆ ನೀಡುತ್ತೇನೆ ಎಂದರು.