ಮುಲಾಯಂ ಸಿಂಗ್ ಆರೋಗ್ಯ ಏರುಪೇರು : ICU ನಲ್ಲಿ ಚಿಕಿತ್ಸೆ!!!

ನವದೆಹಲಿ:

     ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     79 ರ ಹರೆಯದ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸೋಮವಾರ ಸಂಜೆ ತೀವ್ರವಾಗಿ ಕ್ಷೀಣಿಸಿದ್ದು, ಅವರನ್ನು ಗುರುಗ್ರಾಂ ನಲ್ಲಿರುವ ಮೆದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

     ಮುಲಾಯಂ ಸಿಂಗ್ ಯಾದವ್ ಹೈ ಶುಗರ್ ಮತ್ತು ಕಾರ್ಡಿಯೋ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಹಿತಿ ಪ್ರಕಾರ, ಮುಲಾಯಂ ಸಿಂಗ್ ಯಾದವ್ ಅವರ ಅರೋಗ್ಯ ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ವಿಮಾನದ ಮೂಲಕ ದೆಹಲಿಯ ಆಸ್ಪತ್ರೆಗೆ ಕರೆತರಲಾಗಿದೆ.

      ಸೋಮವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮುಲಾಯಂ ಸಿಂಗ್‌ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap