ಮುಂಬೈ:
2008ರ ನವೆಂಬರ್ 26ರಂದು ಮುಂಬೈನಲ್ಲಿ ನಡೆದಿದ್ದ ಭಯಾನಕ ಉಗ್ರದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನನ್ನು ಪಂಜಾಬ್ನ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಪೊಲೀಸ್ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಈ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು, ಹಫೀಜ್ ಸಯ್ಯೀದ್ ಮತ್ತು ಆತನ ನೇತೃತ್ವದ ಲಷ್ಕರ್ ಸಂಘಟನೆಗಳ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ಒದಗಿಸುವುದು ಸೇರಿದಂತೆ ಸುಮಾರು 23 ಉಗ್ರ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Jamatud Dawa's Hafiz Saeed arrested and sent to judicial custody: Pakistan media (file pic) pic.twitter.com/1Txu9BlvoK
— ANI (@ANI) July 17, 2019
2008ರಲ್ಲಿ ಮುಂಬೈನ್ ತಾಜ್ ಹೊಟೆಲ್, ಛತ್ರಪತಿ ಶಿವಾಜಿ ಟರ್ಮಿನಲ್ ಸೇರಿ ಒಟ್ಟು ಆರು ಕಡೆ ಲಷ್ಕರ್ ಇ ತಯ್ಬಾ ದಾಳಿ ನಡೆಸಿತ್ತು. ಸುಮಾರು 12 ಉಗ್ರರು ಸಮುದ್ರದ ಮೂಲಕ ಆಗಮಿಸಿ ಈ ಭೀಕರ ಕೃತ್ಯ ಎಸಗಿದ್ದರು. ಸ್ಥಳೀಯರು, ವಿದೇಶಿಯರು, ಪರರಾಜ್ಯದವರೆಲ್ಲ ಸೇರಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ದಾಳಿಯ ರೂವಾರಿ ಅಜ್ಮಲ್ ಕಸಬ್ನನ್ನು ಪೋಲಿಸರು ಅಂದು ಜೀವಂತವಾಗಿ ಸೆರೆ ಹಿಡಿದಿದ್ದರು. ನಂತರ 2012ರ ನವೆಂಬರ್ನಲ್ಲಿ ಈತನನ್ನು ಪುಣೆಯ ಯರವಾಡ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ.
ಜಮಾತ್–ಉದ್–ದುವಾ ಮುಖ್ಯಸ್ಥ ಹಫೀಜ್ ಇಂದು ಗುರ್ಜನ್ವಾಲಾಕ್ಕೆ ತೆರಳುತ್ತಿದ್ದ ವೇಳೆ ಲಾಹೋರ್ನಲ್ಲಿ ಬಂಧನವಾಗಿದ್ದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
