ಮುಂಬೈನ ಟೆಲಿಫೋನ್ ನಿಗಮ ಕಟ್ಟಡದಲ್ಲಿ ಅಗ್ನಿ ಅವಘಡ!!

ಮುಂಬೈ :

      ಇಲ್ಲಿನ ಬಾಂದ್ರದಲ್ಲಿನ ಮಹಾನಗರ್ ಟೆಲಿಫೋನ್ ನಿಗಮ ಲಿಮಿಟೆಡ್(ಎಂಟಿಎನ್ ಎಲ್)ನ ಬಹುಮಹಡಿ ಕಟ್ಟದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

      ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದ ತಕ್ಷಣ 14 ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು,  ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡಿರುವ ಮಹಡಿಯಲ್ಲಿ ಸುಮಾರು 100 ಮಂದಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. 

      ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅವಘಡದಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಎಎನ್ ಐ ವರದಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ