ಮುಂಬೈ:
ಮಹಾನಗರಿ ಮುಂಬೈನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಬೈ, ಥಾಣೆ ಮತ್ತು ಕೊಂಕಣ ಪ್ರದೇಶದ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ರೈಲು ಮತ್ತು ವಿಮಾನ ಹಾರಾಟ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ. ಹಲವು ಕಡೆಗಳಲ್ಲಿ ಪ್ರವಾಹವಾಗಿದೆ. ಮುಂದಿನ 48 ಗಂಟೆಗಳ ಕಾಲ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹಲವು ರೈಲುಗಳನ್ನು ಸ್ಥಗಿತ ಮಾಡಲಾಗಿದೆ. ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರನ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಬೈ, ಥಾಣೆ, ಪಾಲ್ಘಾರ್, ರಾಯ್ ಗಡ್ ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
