ಮಹಾಲಕ್ಷ್ಮಿ ಎಕ್ಸ್‌ಪ್ರೆಸ್ : ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಪೂರ್ಣ!!

ಮುಂಬೈ:

      ಮುಂಬೈ ಮಹಾನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುವ ಮಹಾಲಕ್ಷ್ಮೀ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 700 ಪ್ರಯಾಣಿಕರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ.

      ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರೈಲು ಹಳಿ ಜಲಾವೃತವಾಗಿ 700ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲು ಪ್ರವಾಹದ ಮಧ್ಯೆ ಸಿಲುಕಿಕೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

      ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್‌) ಮತ್ತು ವಾಯುಪಡೆಯ ಹೆಲಿಕಾಪ್ಟರ್‌ಗಳು ಕಾರ್ಯಾಚರಣೆ ನಡೆಸಿದ್ದು, ಮಧ್ಯಾಹ್ನದ ವೇಳೆಗೆ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಮಧ್ಯ ರೈಲ್ವೇ ಖಚಿತಪಡಿಸಿದೆ. 

      ಪ್ರಯಾಣಿಕರ ರಕ್ಷಣೆಗೆ ಎನ್‌ಡಿಆರ್‌ಎಫ್‌, ಸೇನೆ, ಭಾರತೀಯ ನೌಕಾಪಡೆ, ಪೊಲೀಸರು, ಮತ್ತು ಇತರ ಸಿಬ್ಬಂದಿ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. 

      ಭಾರೀ ಮಳೆ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾದ ಹಿನ್ನೆಲೆಯಲ್ಲಿ ಮಧ್ಯ ರೈಲ್ವೇಯ ಮುಂಬಯಿ ವಿಭಾಗದಲ್ಲಿ 3 ರೈಲುಗಳ ಸಂಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ, 2 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಮತ್ತು 9 ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಮಧ್ಯ ರೈಲ್ವೇ ಪ್ರಕಟಣೆ ತಿಳಿಸಿದೆ. 

Recent Articles

spot_img

Related Stories

Share via
Copy link