ಮೈಸೂರು:
ಶಾಲಾ ಮಕ್ಕಳ ಬಿಸಿಯೂಟದಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಬನ್ನಹಳ್ಳಿಹುಂಡಿ ಗ್ರಾಮ ವರುಣ ಮತ್ತು ತಿ.ನರಸೀಪುರ ಎರಡು ಕ್ಷೇತ್ರಗಳನ್ನೂ ಒಳಗೊಂಡಿದೆ. ಈ ಗ್ರಾಮದ ಶಾಲೆಯ ಅಡುಗೆ ಸಹಾಯಕರು ಅಕ್ಕಿ ಸೋಸುವಾಗ ಪ್ಲಾಸ್ಟಿಕ್ ಅಕ್ಕಿಕಾಳುಗಳೂ ಪತ್ತೆಯಾಗಿವೆ. ಪಾಲಕರು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯನ್ನು ತನಿಖೆಗೆ ಒಳಪಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
