ಮೋದಿಗೆ ಕೊಲೆ ಬೆದರಿಕೆ ಇ-ಮೇಲ್..!!!

0
209

 ದೆಹಲಿ:

      ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

      2019 ರಲ್ಲಿ ಪ್ರದಾನಮಂತ್ರಿ ನರೇಂದ್ರಮೋದಿ ಅವರನ್ನು ಹತ್ಯೆ ಮಾಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ದೆಹಲಿ ಪೊಲೀಸ್ ಆಯುಕ್ತರಿಗೆ ಇ-ಮೇಲ್ ಮೂಲಕ ಸಂದೇಶ ರವಾನಿಸಿರುವ ದುಷ್ಕರ್ಮಿಗಳು ನವೆಂಬರ್‍ನಲ್ಲಿ ಪ್ರದಾನಿ ನರೇಂದ್ರಮೋದಿ ಅವರನ್ನು ಹತ್ಯೆ ಮಾಡುವುದಾಗಿ ಒಂದು ಸಾಲಿನಲ್ಲಿ ತಿಳಿಸಿ, ಬೆದರಿಕೆ ಹಾಕಿದ್ದಾರೆ. ಹಾಗೇ ಮೇಲ್​ನಲ್ಲಿ ಹತ್ಯೆ ಮಾಡುವ ದಿನಾಂಕ ಮತ್ತು ವೇಳೆಯನ್ನು ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ.

      ಅಸ್ಸಾಂ ಜೈಲಿನಿಂದ ಈ ಇ-ಮೇಲ್ ರವಾನೆಯಾಗಿದೆ ಎಂದು ಶಂಕಿಸಲಾಗಿದ್ದು, ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಭದ್ರತೆ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೇ ಈ ಕುರಿತು ತನಿಖೆ ಕೈಗೆತ್ತಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here