‘ಬಿಜೆಪಿ ಗೆದ್ದರೂ ಮೋದಿ ಪ್ರಧಾನಿಯಾಗಲ್ಲ’!!?

ಮುಂಬೈ:

Image result for modi sharad pawar

      ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖಂಡ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.

      ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ‘ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದಾದರೂ ಅದಕ್ಕೆ ಇನ್ನಿತರ ಪಕ್ಷಗಳು ಬೆಂಬಲ ನೀಡುವುದಿಲ್ಲ. ಆ ಕಾರಣ ಬಹುಮತ ಪಡೆಯಲಾಗದೆ ಅದು ಸರ್ಕಾರ ರಚಿಸುವಲ್ಲಿ ವಿಫಲವಾಗುತ್ತದೆ. 

      ಈ ಸಲದ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ಉಂಟುಮಾಡಲಿದೆ, ಬಿಜೆಪಿಗೆ ಅಗತ್ಯ ಸಂಖ್ಯಾ ಬಲದ ಕೊರತೆ ಎದುರಾಗಲಿದೆ,  ಒಂದು ವೇಳೆ ಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದರೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದು ಅವರು ತಿಳಿಸಿದ್ದಾರೆ.

      2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ 326 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 283 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link