ನವದೆಹಲಿ:
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.40 ಸಾವಿರ ಕೋಟಿ ಮೌಲ್ಯದ ಬಹು ನಿರೀಕ್ಷಿತ ಅತ್ಯಾಧುನಿಕ ಎಸ್-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆ ಖರೀದಿ ಸೇರಿದಂತೆ 8 ಐತಿಹಾಸಿಕ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ರಾಜಧಾನಿ ದೆಯರಿ ಹೈದರಾಬಾದ್ ಹೌಸ್ ನಲ್ಲಿ 19ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನದಲ್ಲಿ 5.43 ಬಿಲಿಯನ್ ಡಾಲರ್ ಮೊತ್ತದ 5 ‘ಎಸ್-400 ಟ್ರಯಂಫ್’ ಕ್ಷಿಪಣಿ ನಿರೋಧಕ ವಾಯುರಕ್ಷಣಾ ವ್ಯವಸ್ಥೆ ಖರೀದಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ.
ಭಾರತ ಹಾಗೂ ರಷ್ಯಾ ನಡುವಣ 19ನೇ ದ್ವಿಪಕ್ಷೀಯ ಸಮಾವೇಶ ರಾಜಧಾನಿ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಆರಂಭವಾಗಿದ್ದು, ಮೋದಿ ಹಾಗೂ ಪುಟಿನ್ ಅವರು ನಿರ್ಬಂಧಿತ ಸಭೆಯನ್ನು ನಡೆಸಿದ್ದಾರೆ.
ಪುಟಿನ್ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ಮೋದಿಯವರು ಎಸ್-400 ಟ್ರಯಂಫ್’ಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ, ಉಭಯ ರಾಷ್ಟ್ರಗಳು ಇನ್ನಿತರೆ ಮಹತ್ವದ ಒಪ್ಪಂದಕ್ಕೂ ಸಹಿ ಹಾಕಿವೆ ಎಂದು ವರದಿಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








