ಉಗ್ರರ ಭೀತಿ ಹಿನ್ನೆಲೆ ಎನ್ಐಎ ದಾಳಿ : ಮೊಬೈಲ್, ಲ್ಯಾಪ್‌ಟಾಪ್ ವಶ!!

ಚೆನ್ನೈ:

      ತಮಿಳುನಾಡಿನ 5 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆದಿದ್ದು, ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

      ಲಷ್ಕರ್ ಸಂಘಟನೆಯ ಉಗ್ರರು ಪಾಕಿಸ್ತಾನದಿಂದ ಶ್ರೀಲಂಕಾ ಮೂಲಕ ಭಾರತದೊಳಗೆ ನುಸುಳಿರುವುದರ ಬಗ್ಗೆ ಮಾಹಿತಿ ಪಡೆದ ಎನ್‌ಐಎ ತಂಡ ತಮಿಳುನಾಡಿನ ಕೊಯಮತ್ತೂರಿನ ಐದು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ ಬೆಳಿಗ್ಗೆ ದಾಳಿ ನಡೆಸಿದೆ.

      ಈ ವರೆಗೂ ಹಲವು ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌, ಸಿಮ್‌ ಕಾರ್ಡ್‌ಗಳು ಮತ್ತು ಪೆನ್‌ಡ್ರೈವ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

       ಧಾರ್ಮಿಕ ಹಾಗೂ ಇನ್ನಿತರ ಜನಸಂದಣಿ ಇರುವ ಪ್ರದೇಶಗಳಲ್ಲಿ ಉಗ್ರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಆಧಾರದಲ್ಲಿ ಎನ್‌ಐಎ ದಾಳಿ ನಡೆದಿದೆ.

      ಎರಡು ದಿನಗಳ ಹಿಂದಷ್ಟೇ ಶ್ರೀಲಂಕಾ ಕಡೆಯಿಂದಲೂ ಉಗ್ರರು ನುಸುಳಿರುವ ಸಾಧ್ಯತೆ ಇದೆ ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯ ಸರಕಾರಗಳಿಗೂ ನಗರಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕಾರವಾರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಎಲ್ಲೆಡೆ ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap