ನಿರ್ಭಯಾ ಪ್ರಕರಣ : ಹಂತಕರಿಗೆ ಫೆ.1 ರಂದು ಗಲ್ಲು ಫಿಕ್ಸ್!!!

ನವದೆಹಲಿ :

      ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಕೊಲೆ ಪ್ರಕರಣದ ನಾಲ್ವರು ದೋಷಿಗಳಿಗೆ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ. ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆ ಫಿಕ್ಸ್ ಮಾಡಿದೆ.

      ಪ್ರಕರಣದ ದೋಷಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೇ ಇಂದು ಪವನ್ ಕುಮಾರ್, ದೆಹಲಿ ಪಟಿಯಾಲ ಕೋರ್ಟ್​ ಜಾರಿ ಮಾಡಿರುವ ಡೆತ್​ ವಾರಂಟ್​ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಮಧ್ಯೆ ತಿಹಾರ್​ ಜೈಲು ಅಧಿಕಾರಿಗಳು ಅಪರಾಧಿಗಳಿಗೆ ಬ್ಯ್ಲಾಕ್​ ವಾರಂಟ್​ ಜಾರಿ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ.

      ಕ್ಷಮಾದಾನ ಅರ್ಜಿ ವಜಾಗೊಳಿಸಿದ ಬಳಿಕ 14 ದಿನಗಳ ಕಾಲಾವಕಾಶ ನೀಡಬೇಕು ಎಂಬ ಕಾನೂನು ಇದ್ದಿರುವ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ ಇದೀಗ ನಾಲ್ವರು ಆರೋಪಿಗಳನ್ನು ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link