‘ಕಾಶ್ಮೀರ ವಿಚಾರದಲ್ಲಿ ಯಾವುದೇ ದೇಶ ಮಧ್ಯಪ್ರವೇಶಿಸಬಾರದು’ – ರಾಗಾ

ನವದೆಹಲಿ: 

      ಕಾಶ್ಮೀರವು ಭಾರತದ ಆಂತರಿಕ ವಿಷಯ. ಯಾವುದೇ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

      ಜಮ್ಮು- ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ‘ಅನೇಕ ವಿಷಯಗಳಲ್ಲಿ ಈ ಸರ್ಕಾರವನ್ನು ನಾನು ಒಪ್ಪುವುದಿಲ್ಲ. ಆದರೆ ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಕಾಶ್ಮೀರವು ಭಾರತದ ಆಂತರಿಕ ವಿಷಯ. ಪಾಕಿಸ್ತಾನವೂ ಸೇರಿದಂತೆ ಇತರ ಯಾವುದೇ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ’ ಎಂದು ಉಲ್ಲೇಖಿಸಿದ್ದಾರೆ.

      ಪಾಕಿಸ್ತಾನ​ ವಿಶ್ವದಾದ್ಯಂತ ಉಗ್ರವಾದವನ್ನು ಪ್ರಚೋದಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡಿದ್ದೇನೆ. ಕಾಶ್ಮೀರ ಭಾರತದ ಆಂತರಿಕ ವಿಷಯ ಮತ್ತು ಇಲ್ಲಿ ಪಾಕಿಸ್ತಾನ ಅಥವಾ ಬೇರೆ ಇತೆರೆ ದೇಶಗಳು ಮೂಗು ತೂರಿಸಲು ಅವಕಾಶವಿಲ್ಲ ಎಂದು ಸರಣಿ ಟ್ವೀಟ್​ ಮಾಡಿದ್ದಾರೆ.

       ಕಾಶ್ಮೀರ ಕಣಿವೆಗೆ ಭೇಟಿ ನೀಡಲು ವಿಫಲ ಯತ್ನ ನಡೆಸಿದ ಬಳಿಕ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap