ಮಂಡ್ಯ:
ಒಂಟಿಯಾಗಿ ವಾಸವಿದ್ದ ವೃದ್ದೆಯ ಮನೆ ಬಾಗಿಲು ಮುರಿದು ಮನೆಗೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಪ್ರಕರಣ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ.

ತಡರಾತ್ರಿ ಮನೆಯ ಮುಂಬಾಗಿಲು ಒಡೆದು ಒಳಗೆ ನುಗ್ಗಿದ್ದ ದುಷ್ಕರ್ಮಿಗಳು, ವೃದ್ಧೆಯನ್ನು ಕೊಂದು ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ ಹಾಗೂ ಮಾಟಿ ಸೇರಿದಂತೆ ಸುಮಾರು 75 ಗ್ರಾಂಗಳಿಗೂ ಹೆಚ್ಚು ತೂಕದ ಆಭರಣವನ್ನು ಕಳವು ಮಾಡಿದ್ದಾರೆ.
ಊರಿನ ಜನರು ಈ ಕೊಲೆಯಿಂದಾಗಿ ಆತಂಕಕ್ಕೊಳಗಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
