ಶ್ರೀನಗರ :
ಪಾಕಿಸ್ತಾನದ ಪಡೆಗಳು ನಡೆಸಿದ ಶೆಲ್ ಹಾಗೂ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮುಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆಯ ಪುಂಡಾಟಿಕೆ ಮುಂದುವರೆದಿದ್ದು, ಇಂದು ಬೆಳಗಿನ ಜಾವ ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯ ರಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಪಾಕ್ ಸೈನಿಕರು ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದು,
ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಅವರನ್ನು ಅಸ್ಪತ್ರೆಗೆ ಕರೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪಾಕ್ ಪಡೆಗಳಿಂದ ಎದುರಾದ ಅಪ್ರಚೋದಿತ ದಾಳಿಗೆ ಬಿಎಸ್‌ಎಫ್ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಹೀರಾನಗರ ಸೆಕ್ಟರ್‌ನ ಕರೊಲ್ ಮತ್ರೈ ಎಂಬ ಪ್ರದೇಶಕ್ಕೊಳಪಟ್ಟ ಗ್ರಾಮಗಳು ಹಾಗೂ ಗಡಿಠಾಣೆಗಳನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ