ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರಾ ಎಂಬ ಪ್ರದೇಶದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಿಆರ್ಪಿಎಫ್ ಯೋಧನೋರ್ವ ಹುತಾತ್ಮನಾಗಿದ್ದಾನೆ.
ಛದೂರಾ ಎಂಬ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್’ಪಿಎಫ್ ಪಡೆಯ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಗೊಂಡಿದ್ದ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಜಿ.ಡಿ.ಬಡುಲೆ ಹುತಾತ್ಮ ಸಿಆರ್ಪಿಎಫ್ ಯೋಧ. ಇವರು ಬುಡ್ಗಾಮ್ ಜಿಲ್ಲೆಯ ಕೈಸರ್ಮುಲ್ಲಾದ 117 ಬೆಟಾಲಿಯನ್ನಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ASI) ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ