ಉಗ್ರರನ್ನು ಹತ್ತಿಕ್ಕಲು ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸೇನೆ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಮೂಲಗಳ ಪ್ರಕಾರ ಸ್ಥಳದಲ್ಲಿ ಮತ್ತೊಬ್ಬ ಉಗ್ರ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಇವರಿಬ್ಬರೂ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು ಎನ್ನಲಾಗಿದೆ. ಸದ್ಯ ಭದ್ರತಾಪಡೆಯು ಶೋಧಕಾರ್ಯವನ್ನು ಕೈಗೊಂಡಿದೆ.
Jammu and Kashmir: One terrorist has been gunned down by security forces in Handwara. Operation continues (visuals deferred by unspecified time) pic.twitter.com/UOPILlUn90
— ANI (@ANI) March 7, 2019
ಉಗ್ರನ ಶೋಧಕಾರ್ಯದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸ್ಥಳದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ