ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

ದಾವಣಗೆರೆ:

  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ನಾಮಪತ್ರ ಸಲ್ಲಿಸಿದರು. ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ಜಿಲ್ಲಾ ಚುನಾವಣಾಧಿಕಾರಿ ಜಿ. ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ನಾಮಪತ್ರ ಸಲ್ಲಿಸಿದರು.

  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ವರ, ಇಂದು ನಮ್ಮ ಮನೆ ದೇವರ ಶ್ರೀ ಶೈಲ ಮಲ್ಲಿಕಾರ್ಜುನ ದಿನ. ಹೀಗಾಗಿ ಹಿರಿಯರ ಸಲಹೆಯಂತೆ ನಾಮಪತ್ರ ಸಲ್ಲಿಸಿದ್ದೇನೆ, ಮಧ್ಯಾಹ್ನ ಮತ್ತೊಂದು ನಾಮಪತ್ರವನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.ಕಾಂಗ್ರೆಸ್  ನನಗೆ ಎದುರಾಳಿ. ಅದೊಂದು ರಾಷ್ಟ್ರೀಯ ಪಕ್ಷವಾಗಿದ್ದು, ಏಪ್ರಿಲ್ 4ರವರೆಗೂ ಸಮಯ ಇದೆ.

   ಅವರ ಬಗ್ಗೆ ಹಗುರುವಾಗಿ ಮಾತನಾಡುವುದಿಲ್ಲ ಎಂದರು. ಜಿಲ್ಲೆಯಲ್ಲಿನ ಯುವ ಮತದಾರರು ಶೇ, 100 ರಷ್ಟು ನರೇಂದ್ರ ಮೋದಿ ಅಭಿಮಾನಿಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap