ನಿಜಾಮುದ್ದಿನ್ ಎಕ್ಸ್‍ಪ್ರೆಸ್ ರೈಲಿನಲ್ಲಿ ಬೆಂಕಿ

ಉಡುಪಿ:

  ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ ಎಸಿ ರೈಲು ರಾತ್ರಿ 1.30ರಲ್ಲಿ ಬೈಂದೂರಿನ ರೈಲ್ವೆ ನಿಲ್ದಾಣ ಬಿಟ್ಟು ಚಲಿಸಿದಾಗ ಕಂಬಬದ ಕೋಣೆ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

  ಪ್ರಯಾಣಿಕರೆಲ್ಲರೂ ಗಾಢನಿದ್ರೆಯಲ್ಲಿದ್ದರೂ ಬೆಂಕಿ ಬಿದ್ದಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ. ಕುಂದಾಪುರ ನಿಲ್ದಾಣದಲ್ಲಿ ಇಳಿಯಬೇಕಿದ್ದ ಮಹಿಳೆ ಬೆಂಕಿಯನ್ನು ಗಮನಿಸಿ ತಕ್ಷಣ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ.  ಕೂಡಲೇ ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿದ್ದಾರೆ.

  ಮಹಿಳೆಯ ಸಮಯ ಪ್ರಜ್ಞೆಗೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದು, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ