ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸಿಗರು ಎಂದ ಕೇಂದ್ರ ಸಚಿವ

ಬೆಂಗಳೂರು :

   ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್, ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

   ‘ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾವು ಉಸಿರಾಡಲು ಬಿಡಲ್ಲ. ಈ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಮುಕ್ತ ಮಾಡಿದ್ದೆ ಆದ್ರೆ, ಮುಂಬರುವ ವಿಧಾನಸಭೆಯಲ್ಲೂ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನ ಮಾಡಬೇಕಿದೆ’ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

   ‘ನಾವು ಬಡವರು ಕೆಲಸ ಆಗಿಲ್ಲ ಅಂತಾ ಹೇಳ್ತಿರಿಲ್ಲ ಅದಕ್ಕೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಾಪದ ಫಲವಾಗಿ ನಾವು ಹಿಂದುಳಿದ ಪ್ರದೇಶ ಅಂತಾ ಹೇಳುವಂತಾಗಿದೆ. ಕಾಂಗ್ರೆಸ್ 70 ವರ್ಷದಲ್ಲಿ 6 ಕೋಟಿ ಸಿಲಿಂಡರ್ ಕೊಟ್ಟಿದೆ ಆದರೆ ಪ್ರಧಾನಿ ಮೋದಿ ಸರ್ಕಾರ 5 ವರ್ಷದಲ್ಲಿ 9 ವರೆ ಕೋಟಿ ಸಿಲಿಂಡರ್ ಕೊಟ್ಟಿದ್ದೇವೆ’ ಎಂದು ಅನಂತ್ ಕುಮಾರ್ ಹೆಗಡೆ ತಿಳಿಸಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link