ಬೆಂಗಳೂರು:
ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿನ ರೈತರಿಗೆ ಪರಿಹಾರ ಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಹರಲೂರು ಮುದ್ದೇನಹಳ್ಳಿಯಲ್ಲಿನ ರಕ್ಷಣೆ, ಏರೋಸ್ಪೇಸ್, ಹೈಟೆಕ್ ಇಂಡಸ್ಟ್ರಿ ಬಡಾವಣೆಗಳ ಕೈಗಾರಿಕಾ ಪ್ರದೇಶಕ್ಕೆ ಜಗದೀಶ್ ಶೆಟ್ಟರ್ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಮಾತನಾಡಿ, ರೈತರಿಂದ ಭೂಮಿ ಸ್ವಾಧೀನಪಡಿಸಿಕೊಂಡ ನಂತರ ಅವರಿಗೆ ಪರಿಹಾರ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಪರಿಹಾರ ಧನ ಬಿಡುಗಡೆ ಮಾಡುವಾಗ ಅಧಿಕಾರಿಗಳು ಹಣ ಕೇಳಿದರೆ ದೂರು ನೀಡಿ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ