ಬೆಂಗಳೂರು:
ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದಾರೆ. ಇಂದು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ಭೇಟಿ ನೀಡಲಿದ್ದಾರೆ.
ಇಂದು ಅಂಬರೀಶ್ ಅವರ 6ನೇ ತಿಂಗಳ ಪುಣ್ಯ ತಿಥಿ. ಇದಕ್ಕೆ ಜಯದ ಉಡುಗೊರೆ ಸಿಕ್ಕಿದೆ. ಹಾಗಾಗಿ ಇಂದು ಅಂಬರೀಶ್ ಸಮಾಧಿಗೆ ಬೆಳಗ್ಗೆ 10 ಗಂಟೆಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಪೂಜೆಗೆ ಪೂರ್ವ ಸಿದ್ಧತೆ ನಡೆಸಲಾಗಿತ್ತು. ಸಮಾಧಿಗೆ ಅಲ್ಲಿನ ಸಿಬ್ಬಂದಿ ಅಲಂಕಾರ ಮಾಡಿದ್ದರು.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ 1.30 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಸುಮಲತಾ ಗೆಲುವಿನಲ್ಲಿ ದರ್ಶನ್-ಯಶ್ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಇಂದು ಅವರು ಕೂಡ ಸಮಾಧಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಗೆಲುವಿನ ಬಗ್ಗೆ ದರ್ಶನ್ ಹಾಗೂ ರಾಕ್ಲೈನ್ ವೆಂಕಟೇಶ್ ಮಾತನಾಡಿದ್ದು, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
