ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ, ಅದಕ್ಕೆ ಸುಮ್ಮನಿದ್ದೇನೆ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 

 ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ನಡುವಿನ ಭಿನ್ನಮತ ಮುಂದುವರೆದಿದೆ. ಸಿದ್ದರಾಮಯ್ಯರನ್ನ ಕಾಂಗ್ರೆಸ್​ಗೆ ಕರೆತಂದು ಸಿಎಂ ಆಗುವಂತೆ ಮಾಡಿದ್ದು ನಾನು, ಮತ್ತೊಮ್ಮೆ ಸಿಎಂ ಆಗಲಿ ಎಂದು ಕೆಲವರು ಚೇಲಾಗಿರಿ ಪ್ರದರ್ಶಿಸುತ್ತಿದ್ದಾರೆ ಎಂಬ ಹೆಚ್.ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಉತ್ತರ ನೀಡಿದ್ದಾರೆ.

“ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ” ಎಂದಿದ್ದಾರೆ.  ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನಹರಿಸುವುದು ಒಳಿತು” ಅಂತಾ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

   

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link