ಬೆಂಗಳೂರು :
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ