ಬೆಂಗಳೂರು :
ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ 1.30 ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಅವರು ಸೋತ ಬೇಸರದಲ್ಲಿ ಮೈಸೂರಿನ ಹೋಟೆಲ್ ಒಂದರಲ್ಲಿ ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದು ವರದಿ ಮಾಡಿತ್ತು. ಆದರೆ ಇದೊಂದು ನಕಲಿ ಸುದ್ದಿ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
“ಚುನಾವಣೆಯಲ್ಲಿ ಸೋತ ನಂತರ ನಿಖಿಲ್ ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ತಂಗಿದ್ದರು. ಈ ವೇಳೆ ಸೋಲಿನ ಬೇಸರದಿಂದ ಜೋರಾಗಿ ಗಲಾಟೆ-ರಂಪಾಟ ಮಾಡಿದ್ದರು. ಈ ವೇಳೆ ಹೋಟೆಲ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಎಷ್ಟೇ ಸಮಾಧಾನ ಪಡಿಸಿದರೂ ಅವರ ವಿರುದ್ಧವೂ ವಾಗ್ದಾಳಿ ನಡೆಸಿ ಗಲಾಟೆ ಮಾಡಿದ್ದರು. ಅಜ್ಜ ದೇವೇಗೌಡರ ವಿರುದ್ಧವೂ ಅವರು ಕೂಗಾಡಿದ್ದರು,” ಎಂದು ಪತ್ರಿಕೆಯೊಂದು ಸುದ್ದಿ ಪ್ರಕಟಿಸಿಲಾಗಿತ್ತು.
ಆದರೆ ಇದೊಂದು ಸುಳ್ಳು ಸುದ್ದಿ “ಆ ರೀತಿ ಘಟನೆಯೇ ನಡೆದಿಲ್ಲ ಎಂದು ಹೋಟೆಲ್ನವರೇ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗಿದೆ,” ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಯ ವರದಿ ಸಖತ್ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಎಡೆ ಮಾಟಿಕೊಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ,’ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ,” ಎಂದಿದ್ದಾರೆ
ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ
— H D Kumaraswamy (@hd_kumaraswamy) May 25, 2019